"ಗಾದೆ ಮಾತುಗಳು -- ವೇದ ಸುಳ್ಳಾದರೂ ಗಾದೆ ಸುಳ್ಳಾಗದು.* ೧. ಹಿತ್ತಲ ಗಿಡ ಮದ್ದಲ್ಲ. ೨. ಮಾಡಿದ್ದುಣ್ಣೋ ಮಹರಾಯ. ೩. ಕೈ ಕೆಸರಾದರೆ ಬಾಯಿ ಮೊಸರು. ೪. ಹಾಸಿಗೆ ಇದ್ದಷ್ತು ಕಾಲು ಚಾಚು. ೫. ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ. ೬. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ. ೭. ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ. ೮. ಮನೇಲಿ ಇಲಿ, ಬೀದೀಲಿ ಹುಲಿ. ೯. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ. ೧೦. ಕಾರ್ಯಾವಾಸಿ ಕತ್ತೆಕಾಲು ಹಿಡಿ. ೧೧. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು. ೧೨. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು. ೧೩. ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ. ೧೪. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ. ೧೫. ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ. ೧೬. ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ. ೧೭. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ. ೧೮. ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ. ೧೯. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ. ೨೦. ಬೇಲೀನೆ ಎದ್ದು ಹೊಲ ಮೇಯ್ದ೦ತೆ. ೨೧. ಅ೦ಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ. ೨೨. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ. ೨೩. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ. ೨೪. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ. ೨೫. ...
Comments